Uncategorized
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲ ಕರಾವಳಿಯಲ್ಲಿ ಕೊಲೆ ಪ್ರಕರಣಗಳು ಹೆಚ್ಚು’

ಹುಬ್ಬಳ್ಳಿ, ಮೇ 05: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಕರಾವಳಿ ಪ್ರದೇಶದ ಮಂಗಳೂರಿನಲ್ಲಿ ಅತೀ ಹೆಚ್ಚು ಕೋಮು ಪ್ರಚೋದಕ ಕೊಲೆ ಪ್ರಕರಣಗಳು ನಡೆದಿವೆ. ಸರ್ಕಾರ ತಮ್ಮನ್ನು ರಕ್ಷಣೆ ಮಾಡುತ್ತದೆ ಎಂದು ಒಂದು ವರ್ಗ ಕಾನೂನು ಸುವ್ಯವಸ್ಥೆ ಹದಗೆಡಿಸುವ ಕೃತ್ಯ ಎಸಗುತ್ತಿದೆ’ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು. ಇದೇ ವೇಳೆ ಮಹದಾಯಿ ವಿಚಾರವಾಗಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.