Uncategorized
ಹುಬ್ಬಳ್ಳಿ: ಭೀಕರ ರಸ್ತೆ ಅಪಘಾತ ಒಂದೇ ಕುಟುಂಬದ ಐವರು ಸಾವು.!
ಹುಬ್ಬಳ್ಳಿ: ಭೀಕರ ರಸ್ತೆ ಅಪಘಾತ ಒಂದೇ ಕುಟುಂಬದ ಐವರು ಸಾವು.!
ಹಬ್ಬಳ್ಳಿ: ಸಾಗರದಿಂದ ಬಾಗಲಕೋಟೆಗೆ ಹೊರಟಿದ್ದ ಕುಟುಂಬವೊಂದು, ಹುಬ್ಬಳ್ಳಿಯ ಕುಸುಗಲ್ ಇಂಗಳಹಳ್ಳಿ ಕ್ರಾಸ್ ಬಳಿ ಅಪಘಾತದಲ್ಲಿ ದುರಂತ ಸಾವು ಕಂಡಿದೆ.
ಇನ್ನು ಈ ಅಪಘಾತದಲ್ಲಿ ಸಾವನ್ನಪ್ಪಿದವರು ಶಿವಮೊಗ್ಗ ಜಿಲ್ಲೆಯ ಸಾಗರದವರಾಗಿದ್ದು, ಶ್ವೇತಾ (29), ಅಂಜಲಿ (26), ಸಂದೀಪ್ (26), ವಿಠಲ (55) ಮತ್ತು ಶಶಿಕಲಾ (40) ಎಂದು ಗುರುತಿಸಲಾಗಿದೆ. ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ತನಿಖೆ ನಡೆಸಿದ್ದಾರೆ.