ಅಪರಾಧ
Trending
ಹುಬ್ಬಳ್ಳಿ ಬ್ರೇಕಿಂಗ್ ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಗ್ಯಾಂಗ್ ಅಟ್ಯಾಕ್
ಹುಬ್ಬಳ್ಳಿ: ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಪುಂಡರ ಗ್ಯಾಂಗ್ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯ ರಾಮನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ. ಸ್ಥಳೀಯ ಪ್ರದೇಶದಲ್ಲಿ ಹವಾ ಮೆಂಟೇನ್ ಮಾಡುವ ನಿಟ್ಟಿನಲ್ಲಿ ಈ ಹಲ್ಲೆ ನಡೆದಿದೆ ಎನ್ನಲಾಗಿದೆ.

ಪೀಡಿತ ಯುವಕನನ್ನು ಕೃಷ್ಣ ಎಂದು ಗುರುತಿಸಲಾಗಿದೆ. ಆರೋಪಿಗಳಾದ ಆರ್ಯನ್, ಸುಪ್ರೀತ್, ಆಲ್ವಿನ್ ಮತ್ತು ವಿಶ್ಲೇಶ್ ಸೇರಿ ಐದಾರು ಯುವಕರು ಕ್ರೂರ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಗಂಭೀರವಾಗಿ ಗಾಯಗೊಂಡಿರುವ ಕೃಷ್ಣನನ್ನು ತಕ್ಷಣವೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಸಂಬಂಧ ಕೇಶ್ವಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪುಡಿ ರೌಡಿಗಳ ಮಟ್ಟಹಾಕಲು ಪ್ರಯತ್ನ ಪಟ್ಟರು ಈ ರೀತಿಯ ಗುಂಡಾಗಿರಿ ಇನ್ನೂ ನಡೆಯುತ್ತಲೇ ಇದೆ.