ಉನ್ನತ ಸುದ್ದಿ
Trending

ಹುಬ್ಬಳ್ಳಿ ಗಲಭೆ ಸೇರಿ 43 ಕ್ರಿಮಿನಲ್ ಕೇಸ್ ಹಿಂದಕ್ಕೆ ಪಡೆದ ಆದೇಶವೇ ರದ್ದು : ಸರ್ಕಾರದ ಕ್ರಮಕ್ಕೆ ಹೈಕೋರ್ಟ್‌ ಬ್ರೇಕ್‌!

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಕರ್ನಾಟಕ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ.

ಸಂಘಟನಾ ಹೋರಾಟಗಾರರು, ರಾಜಕಾರಣಿಗಳು ಸೇರಿದಂತೆ 43 ಪ್ರಕರಣಗಳನ್ನು ಅಕ್ಟೋಬರ್ 10, 2024 ರಂದು ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಗಿರೀಶ್ ಭಾರದ್ವಾಜ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಸಿಜೆ ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ದ್ವಿಸದಸ್ಯ ಪೀಠ ಇಂದು ಸರ್ಕಾರದ ಆದೇಶವನ್ನು ರದ್ದುಗೊಳಿಸಿದ್ದಾರೆ.

ನ್ಯಾ.ಎನ್‌.ವಿ.ಅಂಜಾರಿಯಾ ಅವರು ಸುಪ್ರೀಂ ಕೋರ್ಟ್ ಜಡ್ಜ್ ಆಗಿ ನೇಮವಾಗಿದ್ದು ಇಂದು ಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಕೊನೆಯ ಬಾರಿ ತೀರ್ಪು ಪ್ರಕಟಿಸಿದರು.

ಪಿಐಎಲ್‌ ವಿಚಾರಣೆಯ ಸಂದರ್ಭದಲ್ಲೇ ಕೋರ್ಟ್ ಸಚಿವ ಸಂಪುಟದ ಕ್ರಮ ನಿಯಮಬಾಹಿರವಾಗಿದ್ದರೆ ಒಪ್ಪುವುದಿಲ್ಲ, ಪ್ರಕರಣಗಳನ್ನು ಹಿಂಪಡೆಯಲು ಅನುಮತಿ ನೀಡುವುದಿಲ್ಲ ಎಂದು ಹೇಳಿತ್ತು.

ಅರ್ಜಿದಾರರ ಪರ ವಕೀಲರು ಪ್ರಭಾವಿ ವ್ಯಕ್ತಿಗಳೂ ಸೇರಿದಂತೆ ಕೆಲವು ರಾಜಕಾರಣಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಅಪರಾಧ ದಂಡ ಸಂಹಿತೆ ಸೆಕ್ಷನ್ 321ಕ್ಕೆ ವಿರುದ್ಧವಾಗಿ ಸರಕಾರ ಹಿಂಪಡೆದಿದೆ ಎಂದು ಹೇಳಿರುವುದು ಮೇಲ್ನೋಟಕ್ಕೆ ಸಮರ್ಥನೀಯವಾಗಿದೆ ಎಂದು ಅಭಿಪ್ರಾಯಪಟ್ಟಿತ್ತು.

Related Articles

Leave a Reply

Your email address will not be published. Required fields are marked *

Back to top button
error: Content is protected !!