Uncategorized
Trending
Essential Items: ಆಹಾರ ಧಾನ್ಯ ಕೊರತೆ ವದಂತಿಗೆ ಕಿವಿಗೊಡಬೇಡಿ; ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ
ಪ್ರಹ್ಲಾದ್ ಜೋಶಿ ದೇಶದಲ್ಲಿ ಆಹಾರ ಧಾನ್ಯಗಳ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು, ಸರ್ಕಾರದ ಆಹಾರ ಭದ್ರತಾ ವ್ಯವಸ್ಥೆ ಬಲಿಷ್ಠವಾಗಿದೆ ಎಂದು ತಿಳಿಸಿದರು.

ಹುಬ್ಬಳ್ಳಿ: ದೇಶದಾದ್ಯಂತ ಆಹಾರ ಧಾನ್ಯಗಳು (Food Items) ಮತ್ತು ಅಗತ್ಯ ವಸ್ತುಗಳ ಕೊರತೆಯ ಬಗ್ಗೆ ಹರಡುತ್ತಿರುವ ಸುಳ್ಳು ವದಂತಿಗಳಿಗೆ ಜನರು ಕಿವಿಗೊಡಬಾರದೆಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಪ್ರಹ್ಲಾದ್ ಜೋಶಿ(Minister Pralhad Joshi) ಎಚ್ಚರಿಕೆ ನೀಡಿದ್ದಾರೆ. ದೇಶದಲ್ಲಿ ಆಹಾರ ಧಾನ್ಯಗಳಾದ ಅಕ್ಕಿ, ಗೋಧಿ, ಕಡಲೆ, ತೊಗರಿ, ಮಸೂರ್, ಹೆಸರುಕಾಳು ಸೇರಿದಂತೆ ಎಲ್ಲ ಬೇಳೆ-ಕಾಳುಗಳ ದಾಸ್ತಾನು ಅಗತ್ಯಕ್ಕಿಂತ ದುಪ್ಪಟ್ಟು ಇದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ