ದೇಶ
Trending

Operation Sindoor: ಭಾರತ-ಪಾಕ್ ನಡುವೆ ಕದನ ವಿರಾಮ ಘೋಷಣೆ! ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದೇನು?

ದೇಶದ ನಾಗರೀಕರ ಹಿತದೃಷ್ಟಿಯಿಂದ ಕೇವಲ ಎರಡು ದಿನಗಳಲ್ಲಿ ಭಾರತ ತೆಗೆದುಕೊಂಡ ನಿರ್ಧಾರದಿಂದ ಭಾರತ ಮೇಲುಗೈ ಸಾಧಿಸಿದೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ದೇಶದಾದ್ಯಂತ ಸದ್ಯ ಒಂದೇ ಚರ್ಚೆ ನಡೆಯುತ್ತಿದೆ. ಅದು ಭಾರತ-ಪಾಕಿಸ್ತಾನ (India Pakistan War) ನಡುವಿನ ಸಂಘರ್ಷ. ಇದೇ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವರಾಗಿರುವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಕೂಡ ಪ್ರತಿಕ್ರಿಯೆ ನೀಡಿದ್ದು, ದೇಶದ ನಾಗರೀಕರ ಹಿತದೃಷ್ಟಿಯಿಂದ ಕೇವಲ ಎರಡು ದಿನಗಳಲ್ಲಿ ಭಾರತ ತೆಗೆದುಕೊಂಡ ನಿರ್ಧಾರದಿಂದ ಭಾರತ (India) ಮೇಲುಗೈ ಸಾಧಿಸಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಹೆಚ್‌ಡಿ ಕುಮಾರಸ್ವಾಮಿ, ಪಹಲ್ಲಾಮ್‌ನ ಬೈಸರನ್ ಕಣಿವೆಯಲ್ಲಿ ಪಾಕಿಸ್ತಾನದ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಭಾರತದ 26 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಇದಕ್ಕೆ ಪ್ರತಿಯಾಗಿ ಭಾರತ ಭಯೋತ್ಪಾದಕರ ಅಡುಗುತಾಣಗಳ ಮೇಲೆ ದಾಳಿ ನಡೆಸಿ 100ಕ್ಕೂ ಹೆಚ್ಚು ಉಗ್ರರನ್ನು ಹೊಡೆದುರಿಳಿಸಿತು. ಇದಾದ ಬಳಿಕ ಪಾಕಿಸ್ತಾನ ಭಾರತದ ಮೇಲೆ ದಾಳಿ ಮಾಡಲು ವಿಫಲ ಯತ್ನ ನಡೆಸಿತು. ಈ ಹಿನ್ನೆಲೆಯಲ್ಲಿ ಉಭಂಗ ದೇಶಗಳ ನಡುವೆ ಯುದ್ಧದ ಆತಂಕ ಆರಂಭವಾಗಿದೆ ಎಂದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!