ರಾಜ್ಯ ಸರಕಾರದ ಭ್ರಷ್ಟಾಚಾರ ವಿರೋಧಿಸಿ ಬಿಜೆಪಿ ಪ್ರತಿಭಟನೆ
ಹುಬ್ಬಳ್ಳಿ: ವಸತಿ ಇಲಾಖೆಯಲ್ಲಿ ರಾಜ್ಯ ಸರ್ಕಾರದಿಂದ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತು ಸ್ವಪಕ್ಷದ ಶಾಸಕರಿಂದಲೇ ಸಚಿವರ ವಿರುದ್ಧ ಬಹಿರಂಗ ಹೇಳಿಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪೂರ್ವ ಕ್ಷೇತ್ರದ ವತಿಯಿಂದ ನಗರದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಮಿನಿ ವಿಧಾನಸೌಧದ ಆವರಣದಲ್ಲಿರುವ ತಹಸೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು ಸಿಎಂ, ಡಿಸಿಎಂ ಹಾಗೂ ಸಚಿವರು ರಾಜೀನಾಮೆ ನೀಡುವಂತೆ ಆಗ್ರಹಿಸಿದರು.
ವಸತಿ ಇಲಾಖೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತು ಸ್ವಪಕ್ಷದವರಿಂದಲೇ ವಿರೋಧ ವ್ಯಕ್ತವಾಗುತ್ತಿರುವುದರಿಂದ ಮಧ್ಯ ಪ್ರವೇಶಿಸಿ ಬಡವರ ಕಲ್ಯಾಣಕ್ಕಾಗಿ ಮತ್ತು ಸಾಮಾಜಿಕ ಸಮಾನತೆಗಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ ಹಾಗೂ ಸಚಿವ ಜಮೀರ್ ಅಹ್ಮದ ವಿರುದ್ಧ ಕ್ರಮ ಕೈಗೊಂಡು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಂತೆ ತಹಸೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.
ಪೂರ್ವ ಕ್ಷೇತ್ರದ ಅಧ್ಯಕ್ಷ ಮಂಜುನಾಥ ಕಾಟ್ಕರ, ನಾರಾಯಣ ಜರತಾರಘರ, ಪ್ರಭು ನವಲಗುಂದಮಠ, ರಂಗಾ ತಫೇಲಾ, ಜಗದೀಶ ಬುಳ್ಳಾನವರ, ರಂಗಸ್ವಾಮಿ ಬಳ್ಳಾರಿ, ವೆಂಕಟೇಶ ಕಾಟವೆ, ಜಿ.ಎಸ್. ಬನ್ನಿಕೊಪ್ಪ, ಸಾಗರ ರಾಯಕರ, ಅರುಣಕುಮಾರ ಹದ್ಲಿ, ಶಿವಾನಂದ ಅಂಬಿಗೇರ, ಮಾರುತಿ ಚಾಕಲಬ್ಬಿ, ಮಹೇಶ ಸಂತಪ್ಪನವರ, ನಾಗರತ್ನ ಬಳ್ಳಾರಿ, ಸರೋಜಾ ಛಬ್ಬಿ, ಸರೋಜಾ ಶಾಂತಗಿರಿ, ವಿನಾಯಕ ಲದ್ವಾ ಸೇರಿದಂತೆ ಅನೇಕರಿದ್ದರು.




