ಅಪರಾಧ
Trending
31 ಜನರನ್ನು ಗಡಿಪಾರು ಮಾಡಲಾಗಿದೆ:- ಆಯುಕ್ತ ಶಶಿಕುಮಾರ ಹೇಳಿಕೆ
ಹುಬ್ಬಳ್ಳಿ: ಹು-ಧಾ. ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಾಲ್ವರ ಮೇಲೆ ಗೂಂಡಾ ಕಾಯ್ದೆ ಹಾಗೂ 31 ಆರೋಪಿತರನ್ನು ಗಡಿಪಾರು ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸಾಗರ ಲಕ್ಕುಂಡಿ, ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ (ಸೈಂಟಿಸ್ಟ್ ಮಂಜ್ಯಾ), ಶಹರ ಪೊಲೀಸ್ ಠಾಣೆ ವ್ಯಾಪ್ತಿಯ ದಾವೂದ್ ನದಾಫ ಹಾಗೂ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮಣ ಗಭ್ಯಾ ಎಂಬುವರ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಹು-ಧಾ. ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ 1700ಕ್ಕೂ ಹೆಚ್ಚು ರೌಡಿಶೀಟರ್‌ಗಳಿದ್ದಾರೆ. ಅದರಲ್ಲಿ ಈ ಹಿಂದೆ 52 ಆರೋಪಿಗಳನ್ನು ಗಡಿಪಾರು ಮಾಡಲಾಗಿತ್ತು. ಈಗ 31 ಜನ ಸೇರಿ ಒಟ್ಟು 83 ಜನರ ಗಡಿಪಾರು ಮಾಡಲಾಗಿದೆ. ಇನ್ನೂ ಅನೇಕರ ಪಟ್ಟಿ ತಯಾರಿಸಲಾಗುತ್ತಿದೆ. ಮೂರನೇ ಹಂತದಲ್ಲಿ ಇನ್ನಷ್ಟು ಜನರ ಗಡಿಪಾರು ಮಾಡಲಾಗುವುದು ಎಂದು ತಿಳಿಸಿದರು.