ಉನ್ನತ ಸುದ್ದಿ
Trending

*ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಎಂಎಲ್ಸಿ ರವಿ ಕುಮಾರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ*

*ರಾಜ್ಯ ಬಿಜೆಪಿ ನಾಯಕರ ಹೇಳಿಕೆಗಳನ್ನು ಕೇಂದ್ರದ ವರಿಷ್ಠರು ಸಮರ್ಥಿಸುತ್ತಾರಾ?

ಬೆಂಗಳೂರು* :ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಈ ಕುರಿತು ಹೇಳಿಕೆ ನೀಡಿರುವ ಸಚಿವರು, ಕರ್ನಾಟಕದ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್ಸಿ ಅವರ ಮನಸ್ಥಿತಿ ಎಂಥಹದ್ದು ಎಂದು ತೋರಿಸುತ್ತದೆ. ರವಿ ಕುಮಾರ್ ಅವರು ಸಮಸ್ತ ಮಹಿಳಾ ಕುಲಕ್ಕೆ ಮಾಡಿರುವ ಅವಮಾನ ಇದಾಗಿದೆ. ರವಿಕುಮಾರ್ ಅವರ ಹೇಳಿಕೆಯನ್ನು ಕೇಂದ್ರ ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುವರೇ ಎಂದು ಸಚಿವರು ಪ್ರಶ್ನಿಸಿದ್ದಾರೆ.

ಕಳೆದ ಬೆಳಗಾವಿ ಅಧಿವೇಶನದ ವೇಳೆಯಲ್ಲಿ ಸಿಟಿ ರವಿ ಅವರು ನನ್ನ ಬಗ್ಗೆ ಕೆಟ್ಟಾಗಿ ಮಾತನಾಡಿದಾಗ ಆ ಪಕ್ಷದ ನಾಯಕರು ಒಂದೂ ಮಾತನಾಡಲಿಲ್ಲ. ಇಂಥ ನಾಯಕರ ಹೇಳಿಕೆಗಳಿಗೆ ಕೇಂದ್ರದ ನಾಯಕರು ಪರೋಕ್ಷ ಬೆಂಬಲ ನೀಡಿದಂತಿದೆ. ಇದು ಮಹಿಳೆಯರಿಗೆ ಬಿಜೆಪಿ ನಾಯಕರು ಕೊಡುವ ಗೌರವ ಎಂತದ್ದು ಎಂಬುದನ್ನು ತೋರಿಸುತ್ತದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಇಂಥ ಅವಹೇಳನಕಾರಿ ಪದಗಳನ್ನು ಬಳಸುವ ಬಿಜೆಪಿ ನಾಯಕರಿಗೆ ಬುದ್ದಿ ಭ್ರಮಣೆಯಾಗಿದೆ ಅನಿಸುತ್ತದೆ. ಇನ್ನು ಮುಂದಾದರೂ ಇಂಥ ಹೇಳಿಕೆಗಳನ್ನು ನೀಡದೆ, ಜವಾಬ್ದಾರಿಯಿಂದ ವರ್ತಿಸಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

* *ಕ್ಷಮೆಯಾಚನೆಗೆ ಪಟ್ಟು*ಸಾರ್ವಜನಿಕವಾಗಿ ಮಹಿಳಾ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರವಿ ಕುಮಾರ್ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಸಚಿವರು ಆಗ್ರಹಿಸಿದ್ದಾರೆ. ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆ ಕೇಳಲಿ, ಇಲ್ಲವಾದರೆ ರವಿ ಕುಮಾರ್ ಅವರು ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ.ಕರ್ ಕಿಡಿ ಕಾರಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!