ಉನ್ನತ ಸುದ್ದಿ
Trending

*ಮುಂಗಾರು ಹಂಗಾಮು ಬೆಳೆ ಸಮೀಕ್ಷೆ; ಖಾಸಗಿ ನಿವಾಸಿಗಳಿಗೆ ರೇನ್ ಕೋಟ್, ಶೂ, ಬ್ಯಾಗ್ ವಿತರಣೆ*

*ಮುಂಗಾರು ಹಂಗಾಮು ಬೆಳೆ ಸಮೀಕ್ಷೆ; ಖಾಸಗಿ ನಿವಾಸಿಗಳಿಗೆ ರೇನ್ ಕೋಟ್, ಶೂ, ಬ್ಯಾಗ್ ವಿತರಣೆ*

ಹುಬ್ಬಳ್ಳಿ
ತಾಲೂಕು ಆಡಳಿತಸೌಧದ ತಹಶೀಲ್ದಾರ ಕಾರ್ಯಾಲಯದಲ್ಲಿ ಇತ್ತೀಚೆಗೆ 2025-26 ನೇ ಸಾಲಿನ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಬೆಳೆ ಸಮೀಕ್ಷೆ “ನನ್ನ ಬೆಳೆ ನನ್ನ ಹಕ್ಕು” ಅಡಿಯಲ್ಲಿ ತಾಲೂಕಿನ ಖಾಸಗಿ ನಿವಾಸಿಗಳಿಗೆ ತರಬೇತಿಯನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಮಹೇಶ ಗಸ್ತೆ ಮಾತನಾಡಿ, ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಜೂನ್ 20 ರಿಂದ ಆರಂಭಗೊAಡಿದೆ. ಕಳೆದ ವರ್ಷದಂತೆ ಈ ವರ್ಷವು ಸಹ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆ ವಿವರಗಳನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ದಾಖಲಿಸಲು “ಮುಂಗಾರು ರೈತರ ಬೆಳೆ ಸಮೀಕ್ಷೆ 2025” (ಈಚಿಡಿmeಡಿ ಂಠಿಠಿ ಜಿoಡಿ ಏhಚಿಡಿiಜಿ-2025) ಎಂಬ ಹೆಸರಿನ ಮೊಬೈಲ್ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೇಪನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಮೊಬೈಲ್ ಆಪ್ ಬಳಕೆ ಮಾಡುವ ರೀತಿಯನ್ನು ರೈತರಿಗೆ ತಿಳಿಸಲು ಪ್ರತಿ ಗ್ರಾವiದಲ್ಲಿ ನುರಿತ ಖಾಸಗಿ ನಿವಾಸಿಗಳನ್ನು ನೇಮಿಸಲಾಗಿರುತ್ತದೆ ಎಂದರು.

ಖಾಸಗಿ ನಿವಾಸಿಗಳು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಅತ್ಯಂತ ನಿಖರವಾಗಿ ನಿಗದಿತ ಸಮಯದಲ್ಲೆ ಪೂರ್ಣಗೊಳಿಸಲು ಸೂಚಿಸಿದರು.

ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರಾದ ಮಂಜುಳಾ ತೆಂಬದ ಮಾತನಾಡಿ, ಕನಿಷ್ಠ ಬೆಂಬಲ ಯೋಜನೆಯಡಿ (ಒSP) ಆರ್ಹ ಫಲಾನುಭವಿಗಳನ್ನು ಗುರುತಿಸಲು, ಬೆಳೆ ವಿಮಾ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು, ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್ ಅಡಿಯಲ್ಲಿ ಪ್ರವಾಹ ಹಾಗೂ ಬರಗಾಲ ಸಂದರ್ಭದಲ್ಲಿ ನೀಡುವ ಬೆಳೆಹಾನಿ ಪರಿಹಾರ ವಿತರಿಸಲು, ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು, ಸಾಂಖ್ಯಿಕ ಇಲಾಖೆ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಬೆಳೆ ವಿಸ್ತೀರ್ಣ ವರದಿ ಕಾರ್ಯ, ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು, ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಮಾಡಲು ಬೆಳೆ ಸಮೀಕ್ಷೆ ಅವಶ್ಯಕವಾಗಿರುತ್ತದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ನಿರಂತರ ಮಳೆಯಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಲು ಅನುಕೂಲವಾಗುವಂತೆ ಖಾಸಗಿ ನಿವಾಸಿಗಳಿಗೆ ಕೃಷಿ ಇಲಾಖೆ ವತಿಯಿಂದ ರೇನ್ ಕೋಟ್, ಶೂ ಮತ್ತು ಬ್ಯಾಗ್‌ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕೃಷಿ ಅಧಿಕಾರಿಗಳಾದ ಎಮ್.ಜಿ. ಜೋರಮ್ಮನವರ, ಆತ್ಮಾ ಸಿಬ್ಬಂದಿ ಸುಚೆತಾ ಬಾಗೆವಾಡಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳಾದ ಪ್ರಭುಲಿಂಗ ಗಡ್ಡದ, ಹರೀಶ ಎಕ್ಕಿಹಳ್ಳಿಮಠ, ಕಂದಾಯ ನೀರಿಕ್ಷಕರಾದ ರವಿ ಬೆನ್ನೂರ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು

Related Articles

Leave a Reply

Your email address will not be published. Required fields are marked *

Back to top button
error: Content is protected !!