Uncategorized
ಬೆಂಗಳೂರು : ಸಚಿವ ರಾಜಣ್ಣ ರಾಜೀನಾಮೆ ಅಂಗೀಕರಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಚಿವ ಸ್ಥಾನಕ್ಕೆ ಸಹಕಾರಿ ಸಚಿವ ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆಯ ಬೆನ್ನಲ್ಲೇ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಸಚಿವ ರಾಜಣ್ಣ ರಾಜೀನಾಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಗೀಕರಿಸಿದ್ದಾರೆ. ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಕಳುಹಿಸಿದ ಸಿಎಂ, ಸಚಿವ ಸಂಪುಟ ಸದಸ್ಯನ ರಾಜೀನಾಮೆ ಪಡೆದಿರುವ ಕುರಿತು ಅಧಿಕೃತ ಮಾಹಿತಿ ರವಾನಿಸಿದ್ದಾರೆ.
ರಾಜೀನಾಮೆ ಅಂಗೀಕರಿಸುವಂತೆ ರಾಜ್ಯಪಾಲರಿಗೆ ವಿನಂತಿ ಪತ್ರ ಕಳುಹಿಸಲಾಗಿದೆ.




