ಸಚಿವ ನಾಗೇಂದ್ರಗೆ ಕಲ್ಯಾಣ ಕರ್ನಾಟಕ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ

(ಪ್ರತಿನಿಧಿಯಿಂದ)
ಬಳ್ಳಾರಿ, ಆ.22: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಆರೋಪ ಎದಿರಿಸುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ಹಾಗು ಯೋಜನಾ ಸಚಿವ ನಾಗೇಂದ್ರ ಅವರಿಗೆ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿನ್ನೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಹೊಣೆ ನೀಡಿದ್ದಾರೆ.
ಇದು ನಾಗೇಂದ್ರ ಅವರ ಬೆಂಬಲಿಗರು ಮತ್ತು ಜಿಲ್ಲೆಯ ಕಾಂಗ್ರೆಸ್ ಮುಖಂಡರಿಗೆ, ಕಾರ್ಯಕರ್ತರಿಗೆ ಖುಷಿ ಹೆಚರಚೊಸಿದ್ದರೆ.
ಮತ್ತೊಂದು ಕಡೆ ವಾಲ್ಮೀಕಿ ನ೮ಗಮದ ಹಗರಣದ ಆರೋಪದಡಿ ನಾಗೇಂದ್ರ ಅವರ ರಾಜೀನಾಮೆಗೆ ವಿಧಾನಮಂಡಲದ ಹೊರಗೆ ಮತ್ತು ಒಳಗೆ ಪ್ರತಿಭಟನೆ ನಡೆಸುತ್ತಿರುವ ಪ್ರತಿಪಕ್ಷ ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಮತ್ತಷ್ಟು ಕೋಪಕ್ಕೂ ಕಾರಣವಾಗಿದೆ.
2025ರಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯ ರಚಿಸಲಾಗಿದ್ದು, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರೇ ಈ ಸಚಿವಾಲಯದ ಸಚಿವರಾಗಿರುತ್ತಾರೆ ಎಂದು ತಿಳಿಸಲಾಗಿದೆ. ನಾಗೇಂದ್ರ ಅವರಿಗೆ ಸಚಿವ ನೀಡಿರುವುದನ್ನು ವಿರೋಧಿಸುತ್ತಿರುವ ಸಂದರ್ಭದಲ್ಲಿಯೂ ಸಕಾರವು ಅವರಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಿರುವುದು ಮತ್ತಷ್ಟು ರಾಜಕೀಯ ವಾಗ್ವಾದಕ್ಕೆ ಕಾರಣವಾಗತೊಡಗಿದೆ




