ಅಪರಾಧ
Trending
ಮಹಾರಾಷ್ಟ್ರದಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್
ಬೆಳಗಾವಿ: ಕರ್ನಾಟಕ ಮೂಲದ ಎಂಬಿಬಿಎಸ್ ಮೂರನೇ ವರ್ಷದ ವಿದ್ಯಾರ್ಥಿನಿಯ ಮೇಲೆ ಮಹಾರಾಷ್ಟ್ರದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿದೆ.

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಇಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಮೂರು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಪುಣೆ, ಸಾಂಗ್ಲಿ ಹಾಗೂ ಸೊಲ್ಲಾಪುರ ಮೂಲದವರು ಎಂದು ತಿಳಿದು ಬಂದಿದೆ. ಮೇ 18ರಂದು ಸಿನಿಮಾ ನೋಡಲು ಹೋದಾಗ ಕೃತ್ಯ ಎಸಲಾಗಿದೆ. ಬಳಿಕ ಆಕೆಗೆ ಬೆದರಿಕೆ ಸಹ ಹಾಕಲಾಗಿದೆ. ಬಳಿಕ ಪೋಷಕರ ಸಹಾಯದಿಂದ ವಿಶ್ರಂಬಾಗ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ.