Uncategorized
Trending
ಹುಬ್ಬಳ್ಳಿ : ಸಿಲಿಂಡರ್ ಬ್ಲಾಸ್ಟ್: ಮೂವರಿಗೆ ಗಂಭೀರ ಗಾಯ
ಹುಬ್ಬಳ್ಳಿ: ನಗರದ ಚೆನ್ನಪೇಟೆಯ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದ ಪರಿಣಾಮ ಮೂರು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ.

ಸ್ಫೋಟದ ತೀವ್ರತೆಗೆ ಮನೆ ಭಾಗಶಃ ನಾಶವಾಗಿದ್ದು, ಸುತ್ತಮುತ್ತಲಿನ ಮನೆಯ ಕಿಟಕಿ ಕಬ್ಬಿಣದ ಬಾಗಿಲುಗಳು ಕೂಡ ತೀವ್ರ ಹಾನಿಗೊಳಗಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಗಾಯಾಳುಗಳನ್ನು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ನಿಗಾ ವಹಿಸಿದ್ದಾರೆ.
ಘಟನೆಯು ಸಂಭವಿಸಿದ ತಕ್ಷಣವೇ ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
ಸದ್ಯ ಘಟನೆಯ ನಿಖರ ಕಾರಣ ತಿಳಿದುಬರಬೇಕಿರುವುದರಿಂದ ಪೊಲೀಸರು ತನಿಖೆ ಆರಂಭಿಸಿದ್ದಾರೆ.